ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ ಪತ್ತೆ
ಮಂಗಳೂರು; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಹಲವು ಅನುಮಾನಗಳು ಮೂಡಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು ನೇತ್ರಾವತಿ ನದಿಯಲ್ಲಿ ಈ ಘಟನೆ ನಡೆದಿದೆ.
ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26) ಮೃತ ವ್ಯಕ್ತಿಯಾಗಿದ್ದಾರೆ. ಪಾಣೆ ಮಂಗಳೂರು ಹಳೇ ಸೇತುವೆ ಬಳಿ ರಾಜೇಶ್ ಪೂಜಾರಿ ದೇಹ ಪತ್ತೆಯಾಗಿದ್ದು, ಸೇತುವೆಯಲ್ಲಿ ಅವರ ದ್ವಿಚಕ್ರ ವಾಹನ ಸಿಕ್ಕಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಅಥವಾ ಅಪಘಾತವೋ ಗೊತ್ತಾಗುತ್ತಿಲ್ಲ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.