DistrictsPolitics

ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ರಾಹುಲ್‌ ಗಾಂಧಿ

ಮೈಸೂರು; ರಾಜ್ಯದಲ್ಲಿ ಭಾರತ್‌ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ. ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಅವರು, ಬಿಡುವಿನ‌ ಸಮಯದಲ್ಲಿ ಶ್ರೀರಂಗಪಟ್ಟಣದ ಬಳಿಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ವಾಹನದಲ್ಲಿ ಬಂದರು. ಅವರೊಂದಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ ಜೊತೆಗಿದ್ದರು. ಕೊಡಗಿನಲ್ಲಿ ‌ವಿಶ್ರಾಂತಿ ಪಡೆಯುವುದಕ್ಕಾಗಿ ಬರುತ್ತಿರುವ ತಾಯಿ ಸೋನಿಯಾ ಗಾಂಧಿ ಅವರನ್ನು ಮಧ್ಯಾಹ್ನ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಬರಮಾಡಿಕೊಳ್ಳಲಿರುವ ರಾಹುಲ್, ಬಳಿಕ ಶ್ರೀರಂಗಪಟ್ಟಣಕ್ಕೆ ವಾಹನದಲ್ಲಿ ತೆರಳಿ ಅಲ್ಲಿಂದ ಪಾದಯಾತ್ರೆ ಮುಂದುವರಿಸಲಿದ್ದಾರೆ.

Share Post