ಶನಿವಾರ ಬಳ್ಳಾರಿಯಲ್ಲಿ ಭಾರತ್ ಜೋಡೋ ಸಮಾವೇಶ; 4 ಲಕ್ಷ ಜನರ ನಿರೀಕ್ಷೆ
ಚಿತ್ರದುರ್ಗ; ಭಾರತ್ ಜೋಡೋ ಯಾತ್ರೆ ಶನಿವಾರ ಬಳ್ಳಾರಿಗೆ ಪ್ರವೇಶಿಸಲಿದೆ. ಶನಿವಾರ ಬಳ್ಳಾರಿಯಲ್ಲಿ ಭಾರತ್ ಜೋಡೋ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸಮಾವೇಶಕ್ಕೆ ಮೂರು ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಅವರು ಚಿತ್ರದುರ್ಗದಲ್ಲಿ ಹೇಳಿದ್ದಾರೆ.
ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳು ಜನರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲದೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. ಛತ್ತಿಸಗಡ್ ಮುಖ್ಯಮಂತ್ರಿ ಭೂಪೇಶ್ ಬಗೇಲ್ ಹಾಗೂ ರಾಜ್ಯಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ತಿಳಿಸಿದ್ದಾರೆ.