ಚಾಮರಾಜ ಕ್ಷೇತ್ರದಿಂದ ಭವಾನಿ ರೇವಣ್ಣ ಸ್ಪರ್ಧೆ ಸಾಧ್ಯತೆ
ಬೆಂಗಳೂರು; ಈ ಬಾರಿ ಏನಾದರೂ ಮಾಡಿ ಎಲೆಕ್ಷನ್‌ಗೆ ಸ್ಪರ್ಧೆ ಮಾಡಲೇಬೇಕು ಎಂದು ಪಟ್ಟು ಹಿಡಿದಿರುವ ಭವಾನಿ ರೇವಣ್ಣ ಅವರಿಗೆ ಹಾಸನದ ಬದಲಾಗಿ ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಚಾಮರಾಜ ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳೇ ನಿರ್ಣಾಯಕವಾಗಿದೆ. ಜೊತೆಗೆ ಕೊಂಚ ಜೆಡಿಎಸ್‌ಗೂ ಪ್ರಾಬಲ್ಯವಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ಭವಾನಿಯವರಿಗೆ ಟಿಕೆಟ್ ನೀಡಿದರೆ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ನಾಳೆ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿಯವರು ಹೇಳಿದ್ದಾರೆ. ಹೀಗಾಗಿ ಎರಡನೇ ಪಟ್ಟಿಯಲ್ಲಿ ಭವಾನಿ ರೇವಣ್ಣ ಅವರಿಗೆ ಚಾಮರಾಜ ಕ್ಷೇತ್ರದಿಂದ ಟಿಕೆಟ್ ನೀಡುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರದಿಂದ ಕಣಕ್ಕಿಳಿಯಬೇಕೆಂದು ಪಟ್ಟು ಹಿಡಿದಿದ್ದಾರೆ. ಆದ್ರೆ ಆಂತರಿಕ ಸಮೀಕ್ಷೆಯಲ್ಲಿ ಭವಾನಿ ಸೋಲನುಭವಿಸುತ್ತಾರೆ ಎಂದು ಬಂದಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಭವಾನಿಯವರ ಮನವೊಲಿಸಿ, ಅವರನ್ನು ಚಾಮರಾಜ ಕ್ಷೇತ್ರದಲ್ಲಿ ನಿಲ್ಲಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.