CrimeDistricts

ಪೋಲೀಸ್‌ ಜೀಪಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್‌ ಸವಾರ

ಮೈಸೂರು; ಪೊಲೀಸ್ ಜೀಪ್ ಗೆ ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ನಂಜನಗೂಡು ನಗರದ ಟ್ರಾಫಿಕ್ ಪೊಲೀಸ್ ಠಾಣೆ ಮುಂಭಾಗವೇ ಈ ಘಟನೆ ಸಂಬವಿಸಿದೆ. ನಂಜನಗೂಡು ತಾಲ್ಲೂಕಿನ ಮುದ್ದಹಳ್ಳಿ ಗ್ರಾಮದ ಅಭಿ(25)ಎಂಬ ಯುವಕ.ಮುದ್ದಹಳ್ಳಿ ಗ್ರಾಮಕ್ಕೆ ತೆರಳುವ ನಂಜನಗೂಡು ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

 

ನಂಜನಗೂಡು ಟ್ರಾಫಿಕ್ ಪೊಲೀಸ್ ಠಾಣೆ ಒಳಗಿನಿಂದ ಪೊಲೀಸ್ ಜೀಪ್ ಹೊರ ಬಂದಿದೆ ಇದೇ ವೇಳೆ ಬೈಕ್‌ ನಲ್ಲಿ ಬರುತಿದ್ದ ಯುವಕ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಬಂದ ಜೀಪ್ ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಯುವಕ ತಲೆಗೆ ಪೆಟ್ಟಾಗಿ ಸ್ಥಳದಲ್ಲೆ ಅಸುನೀಗಿದ್ದಾನೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share Post