ಸರ್ಕಾರಿ ವೈದ್ಯರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ; ಸಚಿವ ಡಾ.ಕೆ.ಸುಧಾಕರ್
ಮೈಸೂರು; ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ವೈದ್ಯರು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ವೈದ್ಯರಿಗೆ ಜಿಯೊ ಟ್ಯಾಗ್ ಅಳವಡಿಸುವ ಹಾಗೂ ಕಚೇರಿ ಅವಧಿ ಮುಗಿದ ನಂತರ ಕಾಲೇಜಿನಲ್ಲಿಯೇ ಖಾಸಗಿಯಾಗಿ ಚಿಕಿತ್ಸೆ ನೀಡುವ ಅವಕಾಶವನ್ನು ನೀಡುವ ಚಿಂತನೆ ನಡೆಸಲಾಗುತ್ತಿದೆ ಎಂದೂ ಸಚಿವರು ತಿಳಿಸಿದ್ದಾರೆ. ರಾಜ್ಯದಲ್ಲಿ ವೈದ್ಯರ ಕೊರತೆ ನೀಗಿಸಲಾಗಿದೆ. ಶೇಕಡಾ 10ರಷ್ಟು ತಜ್ಞರ ನೇಮಕಾತಿಗೆ ಚಿಂತನೆ ನಡೆಸುತ್ತಿದ್ದೇವೆ ಎಂದೂ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.