Districts

ಪರಿಹಾರ ವಿಚಾರದಲ್ಲಿ ಸರ್ಕಾರದಿಂದ ತಾರತಮ್ಯ ನೀತಿ: ಸಿದ್ದರಾಮನ ಹುಂಡಿಯಲ್ಲಿ ಸಿದ್ದು ಕಿಡಿ

ಮೈಸೂರು: ರಾಜ್ಯದಲ್ಲಿ ಕೋಮು ಗಲಭೆಯಲ್ಲಿ ಮರಣ ಹೊಂದಿದವರ ಪರಿಹಾರ ವಿಚಾರದಲ್ಲಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ ಸತ್ತ ಹಿಂದೂಕಾರ್ಯಕರ್ತ ಹರ್ಷನ ಕುಟುಂಬಕ್ಕೆ 25ಲಕ್ಷ ಪರಿಹಾರ ನೀಡಿದ್ದಾರೆ. ಅದೇ ಕರಾವಳಿಯ ದಿನೇಶ್‌ ಕುಟುಂಬಕ್ಕೆ ಪರಿಹಾರ ಕೊಟ್ಟಿದ್ದಾರಾ..? ಪರಿಹಾರವೇನು ಇವರಪ್ಪನ ಮನೆಯಿಂದ ತಂದು ಕೊಡುತ್ತಾರಾ..? ಸಾಋವಜನಿಕರು ಬೆವರು ಸುರಿಸಿ ದುಡಿದು ಕಟ್ಟುವ ತೆರಿಗೆ ಹಣ ಅದು ಜನರಿಗೆ ಮಕ್ಮಲ್‌ ಟೋಪಿ ಹಾಕಬಹುದೆಂದು ತಿಳಿದುಕೊಂಡಿದ್ದಾರೆ. ಒಂದಲ್ಲಾ ಒಂದು ದಿನ ರಾಜ್ಯದ ಜನರಿಗೆ ಸತ್ಯ ಗೊತ್ತಾಗುತ್ತದೆ. ಭಾವನಾತ್ಮಕ ವಿಚಾರಗಳಿಂದಲೇ ಬಿಜೆಪಿ ಇಕ್ಕಟ್ಟಿಗೆ ಸಿಲುಕುತ್ತದೆ. ರಾಜ್ಯದ ಜನರು ದಡ್ಡರಲ್ಲ, ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಸಂಘ ಪರಿವಾರದವರು ಅಲ್ಪಸಂಖ್ಯಾತರ ಕೊಲೆ ಮಾಡಿದ್ರೆ, ಮೃತ ಅಲ್ಪಸಂಖ್ಯಾತರಿಗೆ ಕಡಿಮೆ ಪರಿಹಾರವನ್ನು ಕೊಡ್ತಾರೆ. ಅದೇ ಮುಸ್ಲಿಂರು ಹಿಂದೂಗಳ ಕೊಲೆ ಮಾಡಿದ್ರೆ ಹೆಚ್ಚು ಪರಿಹಾರ. ಹತ್ಯೆಗೀಡಾದ ಹಿಂದೂಗಳ ಕುಟುಂಬಕ್ಕೆ ಹೆಚ್ಚು ಪರಿಹಾರ ಕೊಡ್ತಾರೆ ಇಂತಹ ತಾರತಮ್ಯ ಏಕೆಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಇಂತಹ ವರ್ತನೆಯಿಂದ ಮತ ಕ್ರೋಢೀಕರಣ ಲೆಕ್ಕಾಚಾರ ಹಾಕ್ತಿದಾರೆ. ಆದರೆ ಅವರ ಲೆಕ್ಕಾಚಾರ ಉಲ್ಟಾ ಆಗುತ್ತದೆ ಎಂದು ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Share Post