DistrictsPolitics

ಶಿವಮೊಗ್ಗದ ರಾಗಿಗುಡ್ಡಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಶಿವಮೊಗ್ಗ; ಕಳೆದ ಭಾನುವಾರ ಶಿವಮೊಗ್ಗದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ರಾಗುಗುಡ್ಡ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಘಟನೆ ಸಂಬಂಧ ಸ್ಥಳೀಯರನ್ನು ಮಾತನಾಡಿಸಲು ಇಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿತ್ತು.

ಕಲ್ಲು ತೂರಾಟದಲ್ಲಿ ಹಲವರು ಗಾಯಗೊಂಡಿದ್ದರು. ಹತ್ತಾರು ಮನೆಗಳಿಗೆ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿ ಸಂತ್ರಸ್ತರಾದ ಪ್ರಸನ್ನ, ಸುಶೀಲಾ, ನಂದಿನಿ, ಸುಚಿತ್ರಾ ನಿವಾಸಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಸಂತ್ರಸ್ತರು ಭಾನುವಾರ ನಡೆದ ಘಟನೆಯನ್ನು ವಿವರಿಸಿ ರಾಜ್ಯ ಬಿಜೆಪಿ ನಾಯಕರ ಬಳಿ ಅಳಲು ತೋಡಿಕೊಂಡರು. ಮೆರವಣಿಗೆ ವೇಳೆ ನಮ್ಮ ಮನೆಗಳ ಮೇಲೆ ದಾಳಿ ಮಾಡಿದ್ದು ಏಕೆ? ಹೆಂಗಸರು, ಮಕ್ಕಳು ಬದುಕುವುದು ಹೇಗೆ, ನಮಗೆ ರಕ್ಷಣೆ ಬೇಕು ಎಂದು ಆಗ್ರಹಿಸಿದರು.

Share Post