DistrictsPolitics

ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು; ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾಗಲಕೋಟೆ; ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳೇ ಬಿಜೆಪಿಯವರ ಮನೆ ದೇವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯ ಬಿಜೆಪಿ ನಾಯಕರು ಮಗತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲೇಬೇಕು ಎಂಬ ಉದ್ದೇಶದಿಂದ ಪದೇ ಪದೇ ಮೋದಿ, ಅಮಿತ್‌ ಶಾರನ್ನು ರಾಜ್ಯಕ್ಕೆ ಕರೆತರುತ್ತಿದ್ದಾರೆ. ಆದ್ರೆ, ಅವರ ಆಟ ಗೊತ್ತಾಗಿದೆ. ಜನ ವೋಟು ಹಾಕೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ ಹದಿನೈದು ಲಕ್ಷ ರೂಪಾಯಿ ಕೊಡೋದಾಗಿ ಮೋದಿ ಹೇಳಿದ್ದರು. ಆದ್ರೆ ಹದಿನೈದು ಪೈಸೆ ಕೂಡಾ ಅವರು ಕೊಡಲಿಲ್ಲ. ಇನ್ನು ಉದ್ಯೋಗಿ ಕೊಡಿ ಎಂದು ಕೇಳಿದರೆ ಪಕೋಡಾ ಮಾರಿ ಎಂದು ಹೇಳುತ್ತಾರೆ ಎಂದು ಲೇವಡಿ ಮಾಡಿದರು.

Share Post