ಬಿಜೆಪಿ ತೊರೆಯುತ್ತಾರಂತೆ ಪರಿಷತ್ ಸದಸ್ಯ ಸಂದೇಶ್ ನಾಗರಾಜ್
ಮೈಸೂರು; ಬಿಜೆಪಿಯ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಬಿಜೆಪಿ ತೊರೆಯಲು ಸಿದ್ಧವಾಗಿದ್ದಾರೆ. ಈ ಬಗ್ಗೆ ಅವರೇ ಹೇಳಿಕೊಂಡಿದ್ದಾರೆ. ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದು, ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಮಾತನಾಡುತ್ತೇನೆ ಅಂತ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.
ನಾನು ಬಿಜೆಪಿಯಲ್ಲಿ ಸಕ್ರಿಯನಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಯವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದ್ದಾರೆ. ಅವರು ಅನ್ಯಾಯ ಮಾಡುವುದರಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಆ ಪಕ್ಷದ ಸಹವಾಸ ಸಾಕು. ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ.