ʻಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇನಾಮಿ ಆಸ್ತಿʼ- ದಾಖಲೆ ರಿಲೀಸ್
ಮೈಸೂರು; ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ವಿಜಯೇಂದ್ರ ವಿರುದ್ಧ ಬೇನಾಮಿ ಆಸ್ತಿ ಮಾಡಿರುವ ಆರೋಪ ಮಾಡಿದ್ದು, ಇದಕ್ಕೆ ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ..
ಮೈಸೂರಿನಲ್ಲಿ ವಿಜಯೇಂದ್ರ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಹಾಗೂ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಜೊತೆ ಕೈಜೋಡಿಸಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಕೆ.ಎಸ್.ಶಿವರಾಮು ಆರೋಪ ಮಾಡಿದ್ದಾರೆ.. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಅವರು, ಈರನಗೆರೆಯಲ್ಲಿ ಸೈಯದ್ ಹಬೀಬ್ ಉರ್ ರೆಹಮನ್, ಸೈಯದ್ ನಸೃತ್, ಬಿಬಿ ಆಯೇಷ ಸೇರಿದಂತೆ 11 ಮಂದಿ ಹೆಸರಲ್ಲಿ ಜಂಟಿ ಜಾಗ ಇತ್ತು.. ಈ ಜಾಗವನ್ನು ಮುಡಾ ವಶಪಡಿಸಿಕೊಂಡಿದ್ದು, ಇದೇ ಜಾಗಕ್ಕೆ 7-7-2021ರಂದು ಬದಲಿ ನಿವೇಶನಕ್ಕೆ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲಾಗಿತ್ತು.. 13-7-2021 ರಂದು 50:50 ಅನುಪಾತದಲ್ಲಿ 12057 ಅಡಿ ವಿಸ್ತೀರ್ಣದ ಜಾಗ ಮಂಜೂರಾತಿ ಮಾಡಲಾಗಿದೆ ಎಂದು ಶಿವರಾಮು ಆರೋಪ ಮಾಡಿದ್ದಾರೆ..
50 ವರ್ಷಗಳ ನಂತರ ಮುಡಾಗೆ ಮೂಲ ಮಾಲೀಕರ ಕಡೆಯಿಂದ ಅರ್ಜಿ ಸಲ್ಲಿಕೆ ಮಾಡಲಾಗಿದೆ.. ಅಂದಿನ ಮುಡಾ ಆಯುಕ್ತ ಡಿ.ಬಿ.ನಟೇಶ್, ಇಂದಿನ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಸೇರಿಕೊಂಡು ಇದರಲ್ಲಿ ಅಕ್ರಮ ಮಾಡಿದ್ದಾರೆ ಅನ್ನೋದು ಶಿವರಾಮು ಅವರ ಆರೋಪವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪ್ತ ವಲಯದಲ್ಲಿ ಮಹಾದೇವಸ್ವಾಮಿ ಗುರುತಿಸಿಕೊಂಡಿದ್ದು, ಎಲ್.ಆರ್.ಮಹದೇವಸ್ವಾಮಿ ಅವರ ಪತ್ನಿ ಹೆಸರಲ್ಲಿ ಬಿ.ವೈ. ವಿಜಯೇಂದ್ರ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಶಿವರಾಮು ಆರೋಪ ಮಾಡಿದ್ದಾರೆ..
ಇದರ ಜೊತೆಗೆ ಹೆಚ್ಚುವರಿಯಾಗಿ ಮೈಸೂರಿನ ಸರಸ್ವತಿಪುರಂನಲ್ಲಿ 50×80 ಹೆಚ್ಚುವರಿ ಸೈಟ್ ಅನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿದ್ದು, ಬಳಿಕ ಇದೇ ನಿವೇಶನ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಪತ್ನಿ ಸೌಮ್ಯ ಎಂ ಸ್ವಾಮಿ ಹೆಸರಲ್ಲಿ ನಿವೇಶನ ಖರೀದಿಸಿದ್ದಾರೆ. ಮಾರುಕಟ್ಟೆ ಮೌಲ್ಯದ ಪ್ರಕಾರ, ಸೈಟ್ 7 ಕೋಟಿ ರೂ.ಗಿಂತ ಹೆಚ್ಚು ಮೌಲ್ಯವುಳ್ಳದ್ದಾಗಿದೆ, ಆದರೆ ಸೌಮ್ಯ ಅದನ್ನು 5.36 ಲಕ್ಷಕ್ಕೆ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ.