CrimeDistrictsPolitics

ಚಿಂಚೋಳಿಯಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಸಚಿವ ಶರಣಪ್ರಕಾಶ್‌ ವಿರುದ್ಧ ಆರೋಪ

ಕಲಬುರಗಿ; ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ವಿರುದ್ಧ ಆಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದ ಶಿವಕುಮಾರ್​(35) ಎಂಬ ಬಿಜೆಪಿ ಕಾರ್ಯಕರ್ತನೇ ಆತ್ಮಹತ್ಯೆ ಮಾಡಿಕೊಂಡಾತ. ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಶಿವಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಆತ್ಮಹತ್ಯೆಗೂ ಮೊದಲು ಶಿವಕುಮಾರ್‌ ಒಂದು ಆಡಿಯೋ ರೆಕಾರ್ಡ್‌ ಮಾಡಿಟ್ಟಿದ್ದಾನೆ. ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವ ಶರಣಪ್ರಕಾಶ್ ಪಾಟೀಲ್ ಕಾರಣ ಎಂದು ಆಡಿಯೋದಲ್ಲಿದೆ. ನಾನು ಹಿಂದೂ ಹುಲಿಯಾಗಿದ್ದೇನೆ, ಹಿಂದೂ ಹುಲಿಯಾಗಿ ಸಾಯುತ್ತೇನೆ ಎಂದೂ ಆಡಿಯೋದಲ್ಲಿ ಹೇಳಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು, ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಕುಮಾರ್‌ ಆತ್ಮಹತ್ಯೆಗೆ ಸಚಿವರೇ ಕಾರಣ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Share Post