CrimeDistricts

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಒಂಭತ್ತು ಮಂದಿ ಅರೆಸ್ಟ್‌

ಕುಶಾಲನಗರ; ಕೊಡಗು ಪ್ರವಾಸದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, 9 ಮಂದಿಯನ್ನು ಬಂಧಿಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಈ ಪ್ರಕರಣ ನಡೆದಿತ್ತು.

ತಡರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಇಲ್ಲಿಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರಿನಲ್ಲಿ ಮೊಟ್ಟೆ ಎಸೆಯಲಾಗಿತ್ತು.

Share Post