DistrictsPolitics

ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

ಚಿಕ್ಕಮಗಳೂರು; ಸಿದ್ದರಾಮಯ್ಯಗೆ ಮತ್ತೆ ಪ್ರತಿಭಟನೆಯ ಬಿಸಿ ತಟ್ಟಿದೆ. ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಇದಕ್ಕೆ ಪ್ರತಿರೋಧವಾಗಿ ಕಾಂಗ್ರೆಸ್‌ ಕಾರ್ಯಕರ್ತರು ಕೂಡಾ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಬಿಜೆಪಿಯವರು ‘ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು. ಇದೇ ವೇಳೆ ಸಾವರ್ಕರ್ ಚಿತ್ರ ಪ್ರದರ್ಶಿಸಿದರು. ಕಾಂಗ್ರೆಸ್‌ನವರು ಸಿದ್ದರಾಮಯ್ಯಗೆ ಜೈ ಎಂದು ಘೊಷಣೆ ಕೂಗಿದರು.

Share Post