CrimeDistricts

ಬೈಕ್‌ಗೆ ಬೊಲೆರೋ ವಾಹನ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ತುಮಕೂರು; ತುಮಕೂರು ಜಿಲ್ಲೆ ಪಾವಗಡ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಲ್ಲಿ ಕಮಲಕುಂಟೆ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಇಬ್ಬರು ವಿದ್ಯಾರ್ಥಿಗಳೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಈಶ್ವರ್‌ ಹಾಗೂ ಯಶವಂತ್‌ ಸಾವನ್ನಪ್ಪಿದ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳು ಪಾವಗಡದ ಶನಿಮಹಾತ್ಮ ದೇವಸ್ಥಾನಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ನಡೆದಿದೆ. ಇವರು ಆಂಧ್ರಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ರೊದ್ದಂ ಮಂಡಲ್‌ನ ಚಿನ್ನಿಕೋಡಿಪಲ್ಲಿ ಗ್ರಾಮದಿಂದ ಪಾವಗಡಕ್ಕೆ ಬರುತ್ತಿದ್ದರು. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ಸೇರಿಸಲಾಗಿದೆ.

Share Post