Districts

ರಾಜ್ಯದಲ್ಲೂ ಕಾಂಗ್ರೆಸ್‌ ಉಸಿರಾಟ ನಿಲ್ಲಿಸಲಿದೆ; ಮಾಜಿ ಸಿಎಂ ಯಡಿಯೂರಪ್ಪ

ಮಂಡ್ಯ: ದೇಶದ 26 ರಾಜ್ಯಗಳಲ್ಲಿ ಕಾಂಗ್ರೆಸ್‌ ಹೆಸರಿಗೇ ಇಲ್ಲ. ಅಲ್ಲೆಲ್ಲಾ ಕಾಂಗ್ರೆಸ್ ಪಕ್ಷದ ಉಸಿರಾಟ ನಿಂತಿದೆ.‌ ಕರ್ನಾಟಕದಲ್ಲಿ ಆ ಪಕ್ಷ ಅಲ್ಪಸ್ವಲ್ಪ ಉಸಿರಾಡುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಇಲ್ಲೂ ಕಾಂಗ್ರೆಸ್ ಉಸಿರು ನಿಲ್ಲಲಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.


ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ 400 ಸ್ಥಾನಗಳಲ್ಲಿ ಗೆಲ್ಲುತ್ತಿದ್ದ ಕಾಂಗ್ರೆಸ್ ಈಗ 40-45 ಸ್ಥಾನಗಳನ್ನು ಗೆಲ್ಲುವ ಸ್ಥಿತಿಗೆ ಬಂದಿದೆ ಎಂದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಮ್ಮ ಅಭ್ಯರ್ಥಿ ಇಲ್ಲದ ಕಡೆಯಲ್ಲಿ ಬೆಂಬಲ ನೀಡುವಂತೆ ಕೇಳಿದ್ದಾರೆ. ನಮ್ಮ ಅಭ್ಯರ್ಥಿ ಇರುವ ಕಡೆ ಹೊಂದಾಣಿಕೆ ಇಲ್ಲ ಎಂದು ಯಡಿಯೂರಪ್ಪ ಇದೇ ವೇಳೆ ಸ್ಪಷ್ಟಪಡಿಸಿದರು.

Share Post