ಎಂಇಎಸ್ ಉದ್ಧಟತನ ಸಹಿಸೋದಿಲ್ಲ: ಮಾಜಿ ಸಿಎಂ ಬಿಎಸ್‌ವೈ
ಮೈಸೂರು: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿರುವ ದಾಂದಲೆಯನ್ನು ಸಹಿಸೋದಕ್ಕೆ ಆಗಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಎಂಇಎಸ್‌ನ ಉದ್ಧಟತನವನ್ನು ಯಾರೂ ಸಹಿಸೋದಕ್ಕೆ ಆಗೋದಿಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಯಡಿಯೂರಪ್ಪ, ಮಹನೀಯರ ಪ್ರತಿಮೆಗಳನ್ನು ಹಾಳು ಮಾಡುವವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಸೋಮವಾರ ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಕಲಾಪದಲ್ಲಿ ಎಂಇಎಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳನ್ನು ಆಗ್ರಹ ಮಾಡುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.