ಜುಲೈ 3ರಿಂದ ಬಜೆಟ್ ಅಧಿವೇಶನ; ಜುಲೈ 7ಕ್ಕೆ ರಾಜ್ಯ ಬಜೆಟ್ ಮಂಡನೆ
ದಾವಣಗೆರೆ; ರಾಜ್ಯದಲ್ಲಿ ಹೊಸ ಸರ್ಕಾರ ಬಂದಿರುವುದರಿಂದ ಬಜೆಟ್ ಮಂಡನೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ದಾವಣಗೆರೆಯಲ್ಲಿ ಮಾತನಾಡಿದ್ದಾರೆ. ಜುಲೈ 3ರಿಂದ ಬಜೆಟ್ ಅಧಿವೇಶನ ಕರೆಯಲಾಗುತ್ತದೆ. ಜುಲೈ 7ರಂದು ಬಜೆಟ್ ಮಂಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಇಂದು ದಾವಣಗೆರೆ ಪ್ರವಾಸದಲ್ಲಿದ್ದು, ಬಜೆಟ್ ಮಂಡನೆ ಬಗ್ಗೆ ಅವರು ಅಲ್ಲಿ ಮಾಹಿತಿ ನೀಡಿದ್ದಾರೆ. ಇನ್ನು ಗ್ಯಾರೆಂಟಿಗಳ ಜಾರಿ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಆದಷ್ಟು ಬೇಗ ಗ್ಯಾರೆಂಟಿಗಳು ಜನರಿಗೆ ತಲುಪುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳಿಗೆ ಈ ಬಗ್ಗೆ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಇನ್ನು ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.