ಬೆಳಗಾವಿಯಲ್ಲಿ ಬಸ್ ಅಪಘಾತ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ; ಬೆಳಗಾವಿ ಸುವರ್ಣ ವಿಧಾನ ಸೌಧದ ಬಳಿ ಕೆಕೆ ಕೊಪ್ಪ ಗ್ರಾಮಕ್ಕೆ ತೆರಳುವ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕೆಲವು ಪ್ರಯಾಣಿಕರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವಿಷಯ ಗಮನಕ್ಕೆ ಬಂದ ತಕ್ಷಣ ಆಸ್ಪತ್ರೆಗೆ ತೆರಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗಾಯಾಳುಗಳ ಆರೋಗ್ಯ ವಿಚಾರಿಸಿ, ಎಲ್ಲರಿಗೂ ಧೈರ್ಯವನ್ನು ತುಂಬಿದರು. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆಯನ್ನು ನೀಡಿದರು.