CrimeDistricts

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌; ತಪ್ಪಿದ ದುರಂತ

ಹಾವೇರಿ; ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿರುವ ಲಂಡೇನಹಳ್ಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಹಳ್ಳಕ್ಕೆ ಬಿದ್ದಿದೆ.  ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 7 ಜನರಿಗೆ ಗಾಯಗಳಾಗಿವೆ. ಬಸ್ ಗದಗದಿಂದ ಹಾವೇರಿಗೆ ತೆರಳುತ್ತಿತ್ತು.

ಬಸ್ ಹಳ್ಳಕ್ಕೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಬಸ್ಸಿನಲ್ಲಿದ್ದವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಣೆ ಮಾಡಿದ್ದಾರೆ. ಹಳ್ಳದಲ್ಲಿ ಭಾರೀ ಪ್ರಮಾಣದ ನೀರು ಇಲ್ಲದಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಗಾಯಾಳುಗಳಿಗೆ ಬಂಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Share Post