ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ
ಮಂಗಳೂರು; ಈಗಾಗಲೇ ಕಾಂಗ್ರೆಸ್ ಹಲವು ಉಚಿತ ಭರವಸೆಗಳನ್ನು ನೀಡಿದೆ. ಅದರಲ್ಲೂ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳೂ ಎರಡು ಸಾವಿರ ರೂಪಾಯಿ ನೀಡೋದಾಗಿ ಹೇಳಿದೆ. ಈ ನಡುವೆ ಮಹಿಳೆಯರಿಗೆ ಮತ್ತೊಂದು ಬಂಪರ್ ಆಫರ್ ನೀಡಲಾಗಿದೆ. ಮಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.
ಅಡ್ಯಾರು ಬಳಿ ಇವತ್ತು ಕಾಂಗ್ರೆಸ್ ಬೃಹತ್ ಸಮಾವೇಶ ಏರ್ಪಡಿಸಲಾಗಿತ್ತು. ಇದರಲ್ಲಿ ರಾಹುಲ್ ಗಾಂಧಿ ಐದನೇ ಘೋಷಣೆ ಮಾಡಿದ್ದಾರೆ. ಇದುವರೆಗೆ ನಾಲ್ಕು ಉಚಿತ ಘೋಷಣೆಗಳನ್ನು ಮಾಡಲಾಗಿತ್ತು. ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳೂ ಎರಡು ಸಾವಿರ ರೂಪಾಯಿ, ಬಡವರಿಗೆ ತಲಾ ಹತ್ತು ಕೆಜಿ ಅಕ್ಕಿ, ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ, ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ ತಿಂಗಳಿಗೆ ಒಂದೂವರೆ ಸಾವಿರ ರೂಪಾಯಿ ನೀಡೋದಾಗಿ ಹೇಳಲಾಗಿದೆ. ಇದೀಗ ಈ ಸಾಲಿಗೆ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿರಬಹುದು.