Districts

ಪಂಚಮಸಾಲಿಗೆ 2D ಮೀಸಲಾತಿ; ಏನಿದು ಹೊಸ ಕೆಟಗರಿ..?

ಬೆಳಗಾವಿ; ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದೆ. ಮೀಸಲಾತಿ ಕೆಟಗರಿಯಲ್ಲಿ ಹಲವು ಬದಲಾವಣೆಯೊಂದಿಗೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಲು ಸರ್ಕಾರ ಮುಂದಾಗಿದೆ.

2C ಮತ್ತು 2D ಎಂಬ ಎರಡು ಪ್ರತ್ಯೇಕ ಪ್ರವರ್ಗ ರಚನೆಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಅದರಲ್ಲಿ 2D ಪ್ರವರ್ಗಕ್ಕೆ ಪಂಚಮಸಾಲಿ ಸಮುದಾಯವನ್ನು ಸೇರಿಸಲು ನಿರ್ಧರಿಸಲಾಗಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಜೆ.ಸಿ.ಮಾಧುಸ್ವಾಮಿ, 3 ಪ್ರವರ್ಗದಲ್ಲಿ ಇರುವವರನ್ನ 2 ಪ್ರವರ್ಗಕ್ಕೆ ತರಲು ಅನುಮೋದನೆ ಕೊಟ್ಟಿದ್ದೇವೆ. 3A ನಲ್ಲಿದ್ದ ಒಕ್ಕಲಿಗರು ಮತ್ತು ಇತರರನ್ನು ಇನ್ಮುಂದೆ 2C ಅಂತ ಮಾಡಿ ಅಲ್ಲಿಗೆ ಸೇರಿಸುತ್ತೇವೆ. 3B ನಲ್ಲಿದ್ದ ಲಿಂಗಾಯತ ಮತ್ತು ಇತರರನ್ನು 2Dಗೆ ಸೇರಿಸುತ್ತೇವೆ ಎಂದು ಹೇಳಿದ್ದಾರೆ.

Share Post