DistrictsPolitics

ಮೈಸೂರು ಜಿಲ್ಲೆಯಲ್ಲಿ ನಾಳೆಯಿಂದ ಕೈ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಮೈಸೂರು; ಮೈಸೂರು ಜಿಲ್ಲೆಯಲ್ಲಿ ನಾಳೆಯಿಂದ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಯಾರು ಯಾರು ಯಾವ ದಿನಾಂಕದಂದು ನಾಮಪತ್ರ ಸಲ್ಲಿಸುತ್ತಾರೆ ಎಂಬ ವಿವರ ಇಲ್ಲಿದೆ.

1) 15.04.2023 ರಂದು ಹುಣಸೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್‌.ಪಿ. ಮಂಜುನಾಥ್ ಅವರು ಮಧ್ಯಾಹ್ನ 12 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

2)17.04.2023 ಎಚ್‍.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ಅಂದು ಮಧ್ಯಾಹ್ನ 2 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

3) 19.04.2023. ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಿದ್ದರಾಮಯ್ಯನವರು ಮಧ್ಯಾಹ್ನ 2 ರಿಂದ 3 ಗಂಟೆ ಒಳಗೆ ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

4)17.04.2023 ರಂದು ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ಅಂದು ಮಧ್ಯಾಹ್ನ 2 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

5)17.04.2023 ರಂದು ನಂಜನಗೂಡಿನ ವಿಧಾನಸಭಾ ಕ್ಷೇತ್ರದ ದರ್ಶನ್ ಧ್ರುವನಾರಾಯಣ್ ಅವರು ಅಂದು ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

6)17.04.2023 ರಂದು
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾವಿ ನಹಳ್ಳಿ ಎಸ್. ಸಿದ್ದೇಗೌಡ ಅವರು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

7) 17.04.2023 ರಂದು ಕೆ. ಆರ್. ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ. ರವಿಶಂಕರ್ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

8) 20.04.2023 ರಂದು ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಹೆಚ್. ಸಿ. ಮಹದೇವಪ್ಪ ಅವರು ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ

Share Post