DistrictsPolitics

ನಾನು ಯಾವ ಕಾರಣಕ್ಕೂ ಬಿಜೆಪಿ ಬಿಡಲ್ಲ; ರಮೇಶ್‌ ಜಾರಕಿಹೊಳಿ

ಬೆಳಗಾವಿ; ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವುದಿಲ್ಲ. ಬಿಜೆಪಿ ಪಕ್ಷದಲ್ಲೇ ಇರುತ್ತೇನೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ಸೇರುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿರುವುದರಿಂದ ಅವರು ಇದಕ್ಕೆ ಸ್ಪಷ್ಟನೆ ನೀಡಿದರು. ನನ್ನ ಮನಸಿಗೆ ಬೇಜಾರಾಗಿ ಒಂದು ವರ್ಷದಿಂದ ಮಾಧ್ಯಮದಿಂದ ದೂರವಿದ್ದೇನೆ. ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಮಾತನಾಡಿದ್ದು ನಿಜ. ದಿನನಿತ್ಯ ಕುಮಾರಸ್ವಾಮಿ ನನ್ನ ಜೊತೆ ಟಚ್ ನಲ್ಲಿ ಇದ್ದಾರೆ. ಆದರೆ ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share Post