CrimeDistricts

ಅಭಿನವ ಕಾಡುಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ

ಬಾಗಲಕೋಟೆ; ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಗುಳೇದಗುಡ್ಡ ತಾಲ್ಲೂಕಿನ ತೋಗುಣಸಿ ತಾಂಡಾದ ಬಳಿ ಇಂದು ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ.

ಸ್ವಾಮೀಜಿಯವರು ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪು ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಕಾಡಿಸಿದ್ದೇಶ್ವರ ಸ್ವಾಮೀಜಿ, ಕಾರು ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಸ್ವಾಮೀಜಿ ಮಠಕ್ಕೆ ಹಿಂತಿರುಗಿದ್ದಾರೆ.

Share Post