CrimeDistricts

ಕಾರಿಗೆ ಅಡ್ಡ ಬಂದ ನಾಯಿ; ಅಪಘಾತದಲ್ಲಿ ಇಬ್ಬರು ಮಹಿಳೆಯರ ದುರ್ಮರಣ

ಚಿತ್ರದುರ್ಗ; ವೇಗವಾಗಿ ಸಂಚರಿಸುತ್ತಿದ್ದ ಕಾರಿಗೆ ನಾಯಿಯೊಂದು ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಭೀಕರ ಅಪಘಾತ ಸಂಭವಿಸಿದೆ, ಚೆಕ್ಕಬೆನ್ನೂರು ಬಳಿ ನಡೆದ ಈ ಅಪಘಾತದಲ್ಲಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ಮೂಲದ ಮಾನ್ಸಿ (40), ಉಜ್ವಲ್‌ ಬಾರ್ವಿ (44) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಸಚಿನ್‌ ಬಾರ್ವಿ ಎಂಬುವವರು ಗಾಯಗೊಂಡಿದ್ದು, ಗಾಯಾಳುವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬಹುತೇಕ ನಜ್ಜುಗುಜ್ಜಾಗಿದೆ.

Share Post