CrimeDistricts

ನಿಯಂತ್ರಣ ತಪ್ಪಿ ಕಾಂಪೌಂಡ್‌ ಹತ್ತಿದ ಕಾರು; ಒಬ್ಬ ಸಾವು

ಮಂಡ್ಯ; ನಿಯಂತ್ರಣ ತಪ್ಪಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರೊಂದು ದೇವಸ್ಥಾನದ ಕಾಂಪೌಂಡ್ ಮೇಲೆ ಹತ್ತಿ ನಿಂತ ಘಟನೆ ಮಂಡ್ಯದ ಬಿಸಿಲುಮಾರಮ್ಮ ದೇವಸ್ಥಾನದ ಬಳಿ ನಡೆದಿದೆ.

ಕಲ್ಲಹಳ್ಳಿ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಬಿಸಿಲುಮಾರಮ್ಮ ದೇವಸ್ಥಾನದ ಬಳಿ ಅಪಘಾತ ನಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರ್‌ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದೆ. ಈ ವೇಳೆ ಕಾರ್ ಪಕ್ಕದಲ್ಲಿ ಸ್ಕೂಟರ್‌ನಲ್ಲಿ ಬರುತ್ತಿದ್ದ ಸಿದ್ದಯ್ಯನಕೊಪ್ಪಲು ಗ್ರಾಮದ ಸತೀಶ್ (40) ಎಂಬುವವರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಿಸಿಲು ಮಾರಮ್ಮ ದೇವಸ್ಥಾನದ ಕಾಂಪೌಂಡ್ ಮೇಲೆ ಹತ್ತಿ ನಿಂತಿದೆ. ಘಟನೆಯಲ್ಲಿ ಸ್ಕೂಟರ್‌ ಸವಾರ ಸತೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

Share Post