CrimeDistricts

ಕಾರು-ಬೈಕ್‌ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

ಬೆಳಗಾವಿ; ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕು ಜಾಲಿಕೊಪ್ಪ ಗ್ರಾಮದ ಬಳಿ ಬೈಕ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದಾಗಿ ಬೈಕ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊತಾಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಸಿದ್ದಪ್ಪ ಮಲ್ಲೂರ (11) ಸ್ಥಳದಲ್ಲೇ ಸಾವನ್ನಪ್ಪಿದ್ದು, ಶಿವಪ್ಪ ಬಸವಂತಗೌಡ ಮಲ್ಲೂರ (46) ಎಂಬುವವರು ಆಸ್ಪತ್ರೆಗೆಂದು ಬೆಳಗಾವಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಸವಾರ ವೀರಣ್ಣ ಚನ್ನಬಸಪ್ಪ ಬಗನಾಳ (32) ಅವರನ್ನು ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Share Post