CrimeDistricts

ನಿಂತಿದ್ದ ಬಸ್‌ಗೆ ಕಾರು ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ದುರ್ಮರಣ

ಮಂಡ್ಯ; ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ನಿಂತಿದ್ದ ಬಸ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಕ್ರಾಸ್‌ ಬಳಿ ಈ ದುರಂತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್‌ ರಸ್ತೆ ಬದಿ ನಿಂತಿತ್ತು. ಈ ವೇಳೆ ಹಾಸನ ಕಡೆಯಿಂದ ಬಂದ ಸ್ವಿಫ್ಟ್‌ ಕಾರು ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಮೂವರು ಪುರುಷರು ಮೃತಪಟ್ಟಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ಈ ದುರ್ಘಟನೆ ನಡೆದಿದೆ. ಬೆಳ್ಳೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಅರ್ಧ ಭಾಗ ಕಾರಿನೊಳಗೆ ತೂರಿದೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.

Share Post