CrimeDistrictsHealth

ಕಲುಷಿತ ನೀರು ಸೇವನೆ ಪ್ರಕರಣ; ಸಾವಿನ ಸಂಖ್ಯೆ 5ಕ್ಕೆ ಏರಿಕೆ..!

ಚಿತ್ರದುರ್ಗ; ಇಲ್ಲಿನ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಹಲವಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಕಾಯಿಲೆ ಉಲ್ಬಣಗೊಳ್ಳುತ್ತಿರುವುದರಿಂದ ಸಾವಿನ ಸಂಖ್ಯೆ ಕೂಡಾ ಏರುತ್ತಲೇ ಇದೆ. ಇದುವರೆಗೆ ಕಲುಷಿತ ನೀರು ಸೇವಿಸಿ ಅಸ್ವಸ್ಥರಾದವರಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರುದ್ರಪ್ಪ ಎಂಬುವವರು ಇಂದು ಸಾವನ್ನಪ್ಪಿದ್ದಾರೆ, ಜೊತೆಗೆ ಮನೆಯಲ್ಲಿಯೇ ಇದ್ದ ಪಾರ್ವತಮ್ಮ ಎಂಬುವವರು ಕೂಡಾ ಅಸುನೀಗಿದ್ದಾರೆ.

ಜುಲೈ 31ರಂದು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಹಲವು ಮಂದಿ ತೀವ್ರ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅಸ್ವಸ್ಥಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಹಲವು ಸಾವನ್ನಪ್ಪುತ್ತಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಪಾರ್ವತಮ್ಮ ಅವರಿಗೆ ಎರಡು ವರ್ಷದ ಹಿಂದೆ ಪಾರ್ಶ್ವವಾಯು ಬಂದಿತ್ತು. ಇದರ ಜೊತೆಗೆ ಕಲುಷಿತ ನೀರು ಸೇವನೆಯಿಂದ ಎರಡು ದಿನದ ಹಿಂದೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು. ಇನ್ನು ಇವರ ಮನೆಯವರೆಲ್ಲರೂ ಕೂಡಾ ಅಸ್ವಸ್ಥರಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಲಾಗಿತ್ತು. ಪಾರ್ವತಮ್ಮ ಪಾರ್ಶ್ವವಾಯು ಪೀಡಿತೆಯಾಗಿದ್ದರಿಂದ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಆಕೆ ಇಂದು ಮೃತಪಟ್ಟಿದ್ದಾರೆ.

Share Post