ಕಾವೇರಿ ನೀರು ವಿಚಾರ; ಪ್ರತಿದಿನ 5 ಕ್ಯೂಸೆಕ್ ನೀರು ಬಿಡಲು ಸೂಚನೆ
ನವದೆಹಲಿ; ಕಾವೇರಿ ವಿಚಾರದಲ್ಲಿ ಮತ್ತೆ ರಾಜ್ಯಕ್ಕೆ ಹಿನ್ನಡೆಯಾಗಿದೆ. ಕಾವೇರಿ ನೀರು ನಿರ್ವಹಣಾ ಸಮಿತಿ, ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ನೀಡಿದೆ. ಪ್ರತಿದಿನ 5 ಸಾವಿರ ಕ್ಯೂಸೆಕ್‌ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆ ಇಲ್ಲದ ಕಾರಣ, ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇದೆ. ಹೀಗೆಯೇ ಮುಂದುವರೆದರೆ, ಕುಡಿಯುವ ನೀರಿಗೂ ಸಮಸ್ಯೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ನೀರು ಬಿಡಲು ಆಗುವುದಿಲ್ಲ ಎಂದು ಹೇಳಿತ್ತು. ರೈತರು ಕೂಡಾ ತಮಿಳುನಾಡಿಗೆ ನೀರು ಬಿಡಬಾರದು ಎಂದು ಹೋರಾಟ ಮಾಡುತ್ತಿದ್ದಾರೆ. ಈ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಸಭೆಯಲ್ಲಿ ಈ ಆದೇಶ ನೀಡಲಾಗಿದೆ.
ಪ್ರಾಧಿಕಾರ ನೀರು ಬಿಡುವಂತೆ ಸೂಚನೆ ನೀಡಿರುವುದರಿಂದ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.