CrimeDistricts

ಚೆಕ್‌ಬೌನ್ಸ್‌ ಕೇಸ್‌; ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ವಾರಂಟ್‌

ಮೈಸೂರು; ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣಗೆ ಕಾನೂನು ಸಂಕಷ್ಟ ಎದುರಾಗಿದೆ.. ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮೈಸೂರು ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರಂಟ್‌ ಜಾರಿ ಮಾಡಿದೆ.. ಇದರಿಂದಾಗಿ ಸ್ನೇಹಮಯಿ ಕೃಷ್ಣಗೆ ಬಂಧನದ ಭೀತಿ ಎದುರಾಗಿದೆ..
2015ರ ಚೆಕ್‌ ಬೌನ್ಸ್‌ ಪ್ರಕರಣದ ಸಂಬಂಧ ಮೈಸೂರು ಕೋರ್ಟ್‌ ಈ ಆದೇಶ ಹೊರಡಿಸಿದೆ.. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್‌ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ.. ಅತ್ತ ವಾರೆಂಟ್ ಬೆನ್ನಲ್ಲೇ ಇತ್ತ ಮತ್ತೊಂದು ಶಾಕ್ ಸಿಕ್ಕಿದೆ. ನಾಳೆ ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಮುಡಾ ಹಗರಣ ಕುರಿತು ಇ.ಡಿಗೆ ದೂರು ಸಲ್ಲಿಸಿದ ಹಿನ್ನೆಲೆ ವಿಚಾರಣೆಗೆ ಬರುವಂತೆ ಇ.ಡಿ ಸಮನ್ಸ್ ನೀಡಿದೆ.

Share Post