Districts

ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ; ಎಸ್‌ಡಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರು

ಧಾರವಾಡ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಡೋಜ ಚೆನ್ನವೀರ ಕಣವಿ ಇಹಲೋಕ ತ್ಯಜಿಸಿದ್ದಾರೆ. ಚೆನ್ನವೀರ ಕಣವಿ ಅವರು ಕಳೆದ ಒಂದು ತಿಂಗಳಿಂದ ಎಸ್​ಡಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ವೆಂಟಿಲೇಟರ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಖ್ಯಾತ ಕವಿ ಚೆನ್ನವೀರ ಕಣವಿ ಅವರು ಅಕ್ಯೂಟ್​ ರೆಸ್ಪಿರೇಟರಿ ಡಿಸ್ಟ್ರೆಸ್​ ಸಿಂಡ್ರೋಮ್​ನಿಂದ ಬಳಲುತ್ತಿದ್ದರು. ಜೊತೆಗೆ ಕೊರೊನಾ ಕೂಡಾ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವೇ ಕಾಳಜಿ ವಹಿಸಿ, ತಜ್ಞ ವೈದ್ಯರನ್ನು ನೇಮಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಾಡೋಜ ಕಣವಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Share Post