CrimeDistricts

ಮನೆ ಮೇಲೆ ಬಿದ್ದ ಕೋಳಿ ಸಾಗಾಟದ ವಾಹನ; ಮಹಿಳೆ ಸ್ಥಿತಿ ಗಂಭೀರ

ಮಂಗಳೂರು; ಕೋಳಿಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನವೊಂದು ರಸ್ತೆಯಿಂದ ಉರುಳಿ ಮನೆಯೊಂದರ ಮೇಲೆ ಬಿದ್ದಿದೆ. ಇದ್ರಿಂದಾಗಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಸಾರಡ್ಕ ಬಳಿಯ ಕೂರೇಲು ಎಂಬಲ್ಲಿ ಈ ಘಟನೆ ನಡೆದಿದೆ. ಪಿಕಪ್‌ ವಾಹನ ನಿಯಂತ್ರಣ ತಪ್ಪಿ ಉರುಳಿದ್ದು, ಅದು ಮನೆಯ ಮೇಲೆ ಬಿದ್ದಿದೆ. ಇದ್ರಿಂದಾಗಿ ಮನೆ ಸಂಪೂರ್ಣ ಹಾನಿಯಾಗಿದೆ.

ತೀವ್ರವಾಗಿ ಗಾಯಗೊಂಡಿರುವ ಮಹಿಳೆಯನ್ನು ಮಂಗಳೂರಿನ ಸರ್ಕಾರಿ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕ್ರೇನ್‌ ಮೂಲಕ ವಾಹನವನ್ನು ಮೇಲಕ್ಕೆತ್ತಲಾಗಿದೆ. ವಾಹನದಲ್ಲಿದ್ದ 500 ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

 

Share Post