ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರ; ಪರಿಶೀಲಿಸಿ ಸೂಕ್ತ ಕ್ರಮ ಎಂದ ಸಿಎಂ
ಮೈಸೂರು; ಒಕ್ಕಲಿಗ ಸಮುದಾಯ ಮೀಸಲಾತಿ ಹೆಚ್ಚಳಕ್ಕೆ ಗಡುವು ನೀಡಿರುವುದು ನನ್ನ ಗಮನಕ್ಕೆ ಬಂದಿದೆ. ಎಲ್ಲಾ ಸಮುದಾಯಗಳಲ್ಲೂ ನಿರೀಕ್ಷೆಗಳು ಹೆಚ್ಚಾಗಿವೆ, ಹೀಗಾಗಿ ಸಂವಿಧಾನದ ಚೌಕಟ್ಟಿನೊಳಗೆ ಎಲ್ಲರಿಗೂ ನ್ಯಾಯ ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಿಸಬೇಕಾದರೆ ಅದನ್ನು ಸಂವಿಧಾನದ ಚೌಕಟ್ಟಿನಲ್ಲೇ ಮಾಡಬೇಕಾಗುತ್ತದೆ. ನಾನು ಎಲ್ಲಾ ಸಮುದಾಯದ ಹಿತಚಿಂತಕನಾಗಿ ಕೆಲ್ಸ ಮಾಡ್ತಿದ್ದೇವೆ. ಒಕ್ಕಲಿಗರ ಮನವಿ ಸಿಕ್ಕಿಲ್ಲ. ಸಿಕ್ಕ ಮೇಲೆ ಈ ಬಗ್ಗೆ ಪರಿಶೀಲನೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಮೈಸೂರಿನ 131 ಪಾರಂಪರಿಕ ಕಟ್ಟಡಗಳ ಕಾಯಕಲ್ಪಕ್ಕೆ ಹಣಕಾಸಿನ ವ್ಯವಸ್ಥೆ ನೋಡಿಕೊಂಡು ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ, ಏಕರೂಪ ನಾಗರಿಕ ಸಂಹಿತೆ ಜಾರಿ ಬಿಜೆಪಿ ಪಕ್ಷದ ಗುರಿಯಾಗಿದೆ ಎಂದರು.