Districts

ನೆರವಾಯ್ತು 112 ಹೆಲ್ಪ್‌ಲೈನ್‌; ಆರು ಮಂದಿಯ ಪ್ರಾಣ ಉಳಿಸಿದ ಸಿಬ್ಬಂದಿ

ಚಿತ್ರದುರ್ಗ: ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ಒಂದೇ ಕುಟುಂಬದ ಆರು ಮಂದಿಯನ್ನು 112 ಹೆಲ್ಪ್‌ಲೈನ್‌ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ನಿನ್ನೆ ಸಂಜೆ ಹಿರಿಯೂರಿನ ವಾಣಿ ವಿಲಾಸ ಜಲಾಶಯಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಒಂದೇ ಕುಟುಂಬದ ಆರು ಮಂದಿ ಹೋಗಿದ್ದರು. ಈ ವೇಳೆ 112 ಸಿಬ್ಬಂದಿ ಬಂದು ರಕ್ಷಿಸಿದ್ದಾರೆ.


ಹಿರಿಯೂರು ತಾಲ್ಲೂಕಿನ ರಂಗೇನಹಳ್ಳಿಯ ರತ್ನಮ್ಮ ಎಂಬುವವರು ಗಂಡನಿಂದ ಬೇರೆಯಾಗಿದ್ದರು. ಮೂವರು ಮಕ್ಕಳೊಂದಿಗೆ ಹಿರಿಯೂರಿನ ಸಕ್ಕರೆ ಕಾರ್ಖಾನೆ ವಸತಿ ಗೃಹದಲ್ಲಿ ಎರಡು ತಿಂಗಳಿಂದ ರತ್ನಮ್ಮ ವಾಸವಿದ್ದರು. ಆದರೆ ಗಂಡ ಸಕ್ರಪ್ಪ ಸೋಮವಾರ ತನ್ನ ಪತ್ನಿ ವಾಸವಾಗಿದ್ದ ಮನೆಯ ಹತ್ತಿರ ಬಂದು ಗಲಾಟೆ ಮಾಡಿದ್ದಾನೆ. ಗಂಡನ ಗಲಾಟೆಯಿಂದ ಬೇಸತ್ತ ರತ್ನಮ್ಮ, ಇದೇ ರೀತಿ ತೊಂದರೆ ಕೊಟ್ಟರೆ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಿದ್ದಾರೆ. ತಾನೂ ಜೊತೆಗೆ ಬಂದು ಸಾಯುತ್ತೇನೆ ಎಂದು ಸಕ್ರಪ್ಪ ಅವರ ಜೊತೆ ಹೋಗಿದ್ದರು.ಆಗ ಎಲ್ಲಿ ತನ್ನ ಮಕ್ಕಳನ್ನು ಸಿಟ್ಟಿನ ಭರದಲ್ಲಿ ನೀರಿಗೆ ಎಸೆದು ಬಿಡುತ್ತಾನೋ ಎಂಬ ಭಯದಲ್ಲಿ ರತ್ನಮ್ಮ 112ಕ್ಕೆ ಕರೆ ಮಾಡಿದ್ದಾರೆ.
ತಕ್ಷಣವೇ ಇಆರ್‌ಎಸ್ಎಸ್ ಕೇಂದ್ರದ ಸಿಬ್ಬಂದಿ ರಮಾಕಾಂತ್ ಅವರು ಹೊಯ್ಸಳ ವಾಹನಕ್ಕೆ ವಿಷಯ ಮುಟ್ಟಿಸಿದ್ದಾರೆ. ಅಧಿಕಾರಿ ಗಂಗಾಧರ್ ಮತ್ತು ಚಾಲಕ ರವಿ ತಕ್ಷಣ ಕಾರ್ಯಪ್ರವೃತ್ತರಾಗಿ, ಘಟನಾ ಸ್ಥಳಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳಲು ಹೋದವರ ಮನವೊಲಿಸಿದ್ದಾರೆ.

 

Share Post