DistrictsPolitics

ಸಂಪುಟ ಪುನಾರಚನೆಯೋ, ವಿಸ್ತರಣೆಯೋ ಕಾದು ನೋಡಿ; ಸಿಎಂ

ಚಿತ್ರದುರ್ಗ; ಸಂಪುಟ ಸೇರಲು ಹಲವರು ಆಕಾಂಕ್ಷಿಗಳಾಗಿದ್ದಾರೆ. ಈ ಬಗ್ಗೆ ಸಿದ್ಧತೆಗಳು ನಡೆಯುತ್ತಿವೆ. ದೆಹಲಿಗೆ ತೆರಳಿ ಹೈಕಮಾಂಡ್‌ ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೊಸದುರ್ಗದಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಯೊ, ಪುನರ್ ರಚನೆಯೊ ಕಾದು ನೋಡಿ ಎಂದು ಹೇಳಿದ್ದಾರೆ.

ಚಿತ್ರದುರ್ಗಕ್ಕೆ ಪ್ರಾತಿನಿಧ್ಯ ನೀಡಲು ಸಾಧ್ಯವಾಗಿರಲಿಲ್ಲ. ಈ ಬಾರಿ ಅವಕಾಶ ನೀಡಲು ಪ್ರಯತ್ನಿಸಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ತಿಳಿಸಿದ್ದಾರೆ.

Share Post