DistrictsPolitics

ಪರಿಶಿಷ್ಟರ ಮನೆಯಲ್ಲಿ ಉಪಾಹಾರ ಸೇವಿಸಿದ ಸಿಎಂ ಹಾಗೂ ಮಾಜಿ ಸಿಎಂ

ಹೊಸಪೇಟೆ; ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರ ಮನೆಯಲ್ಲಿ ಉಪಾಹಾರ ಸೇವಿಸಿದರು. ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಕಮಲಾಪುರದ ಡಾ.ಬಿ.ಆರ್.‌ಅಂಬೇಡ್ಕರ್ ಕಾಲೊನಿಗೆ ಭೇಟಿ ನೀಡಿದ್ದ ನಾಯಕರು, ಪರಿಶಿಷ್ಟ ಜಾತಿಯ ಹಿರಾಳ್ ಕೊಲ್ಲಾರಪ್ಪ ಅವರ ಮನೆಯಲ್ಲಿ ಉಪಾಹಾರ ಸೇವನೆ ಮಾಡಿದರು.

ಹಿರಾಳ್‌ ಕೊಲ್ಲಾರಪ್ಪ ಮನೆಯಲ್ಲಿ ಒಗ್ಗರಣೆ, ಮಿರ್ಚಿ, ಉಪ್ಪಿಟ್ಟು ತಯಾರಿಸಿದ್ದರು. ಇದನ್ನು ತಿಂದ ನಾಯಕರು, ನಂತರ ಟೀ ಸೇವಿಸಿದರು. ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜುಗೌಡ ಮುಂತಾದ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.

Share Post