ಗಡಿನಾಡ ಕನ್ನಡಿಗರ ಅಭಿವೃದ್ಧಿಗೆ ವಿಶೇಷ ಯೋಜನೆ; ಸಿಎಂ ಬೊಮ್ಮಾಯಿ
ರಾಮದುರ್ಗ; ಗಡಿ ಕನ್ನಡಿಗರ ಅಭಿವೃದ್ಧಿಗಾಗಿ ಎರಡು ವಿಶೇಷ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಅವುಗಳನ್ನು ಕೆಲವೇ ದಿನಗಳಲ್ಲಿ ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಲ್ಲಿ 671.28 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಹಾರಾಷ್ಟ್ರ, ತಮಿಳುನಾಡು, ಗೋವಾ, ತೆಲಂಗಾಣದ ಗಡಿಗಳಲ್ಲಿನ 1,800 ಗ್ರಾಮ ಪಂಚಾಯಿತಿಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ರಸ್ತೆಗಳ ಸುಧಾರಣೆ, ಕುಡಿಯುವ ನೀರಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಅವರು ಹೇಳಿದರು. ಹೊರ ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಅಲ್ಲಿನ ಸರ್ಕಾರಗಳು ಕಡೆಗಣಿಸಿವೆ. ಗಡಿ ಒಳಗಿನ ಹಾಗೂ ಹೊರಗಿನ ಎಲ್ಲ ಕನ್ನಡ ಶಾಲೆಗಳ ಅಭಿವೃದ್ಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲ ಶ್ರಮಿಸುತ್ತೇವೆ. ಅದಕ್ಕಾಗಿ ಸರ್ಕಾರ 100 ಕೋಟಿ ರೂಪಾಯಿ ನೀಡಲಿದೆ ಎಂದು ಹೇಳಿದರು.