ಹೆಚ್‌ಡಿಕೆ ಗಂಡಸ್ತನದ ಪ್ರಶ್ನೆಗೆ ಬೊಮ್ಮಾಯಿಯವರ ಪ್ರತಿಕ್ರಿಯೆ ಏನು..?
ತುಮಕೂರು: ಹಿಜಾಬ್, ಹಲಾಲ್ ಮಾಂಸದ ವಿಚಾರವಾಗಿ ರಾಜ್ಯದಲ್ಲಿ ಅಶಾಂತಿ ಏರ್ಪಡಾಗಿದೆ. ಈ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕಂಡು ಬೇಸರಗೊಂಡ ಮಾಜಿ ಸಿಎಂ ಕುಮಾರಸ್ವಾಮಿ ಸಿಎಂಗೆ ಗಂಡಸ್ತನ ಇದ್ರೆ ಇದೆಲ್ಲವನ್ನು ನಿಲ್ಲಿಸುವಂತೆ ಸವಾಲ್ ಹಾಕಿದ್ರು. ಹೆಚ್‌ಡಿಕೆ ಸವಾಲ್ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದಾರೆ.
ತುಮಕೂರಿನಲ್ಲಿ ಕುಮಾರಸ್ವಾಮಿಯ ಗಂಡಸ್ತನದ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಗಂಡಸ್ತನದ ಸವಾಲು ಏನ್ ಇಲ್ಲಿ ಬರೋದಿಲ್ಲ. ನಾವು ನಮ್ಮ ಕೆಲಸ ಮಾಡ್ತಿದ್ದೇವೆ. ರಾಜ್ಯದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡ್ತಿದೆ. ಈ ಬಗ್ಗೆ ಯಾರೂ ಗೊಂದಲಕ್ಕೆ ಒಳಗಾಗುವ ಪ್ರಶ್ನೆಯೇ ಇಲ್ಲ ಎಂದು ಉತ್ತರ ನೀಡಿದ್ದಾರೆ.
ತುಮಕೂರಿನಲ್ಲಿ ಸಿದ್ಧಲಿಂಗ ಶ್ರೀಗಳ ಭೇಟಿ
ಶ್ರೀ ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ನಾಳೆ ಸಿದ್ಧಗಂಗಾ ಮಠಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರಿಗೆ ತೆರಳಿದ ಸಿಎಂ ಬಸವರಾಜ್ ಬೊಮ್ಮಾಯಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ರು. ಸಿದ್ಧಲಿಂಗ ಶ್ರೀಗಳನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಿದ್ರು. ಸಿಎಂ ಬೊಮ್ಮಾಯಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಧುಸ್ವಾಮಿ, ಸೋಮಣ್ಣ ಸಾಥ್ ನೀಡಿದ್ರು.