DistrictsPolitics

ಉಜ್ವಲ್ ಯೋಜನೆ ಅಡಿಯಲ್ಲಿ ಪ್ರತಾಪ್ ಸಿಂಹ-ರಾಮದಾಸ್ ನಡುವೆ ಕೋಲ್ಡ್ ವಾರ್

ಮೈಸೂರು: ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ರಾಮದಾಸ್ ನಡುವೆ  ಉಜ್ವಲ್‌ ಯೋಜನೆಗೆ ಸಂಬಂಧಿಸಿದಂತೆ ಕೋಲ್ಡ್ ವಾರ್ ಶುರುವಾಗಿದೆ. ಕೇಂದ್ರ ಸರ್ಕಾರದ ಉಜ್ವಲ್ ಯೋಜನೆಯಡಿ ಗ್ಯಾಸ್ ನೀಡುವ ಯೋಜನೆಗೆ ಅನುಮತಿ ನೀಡದಂತೆ ಪತ್ರ ಬರೆದಿದ್ದ ಶಾಸಕ ಎಸ್.ಎ ರಾಮದಾಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಗ್ಯಾಸ್ ನೀಡುವ ಯೋಜನೆಗೆ ಅನುಮತಿ ನೀಡದಂತೆ ಶಾಸಕ ಎಸ್.ಎ.ರಾಮದಾಸ್ ಮೈಸೂರು ಮಹಾನಗರ ಪಾಲಿಕೆ ಅಯುಕ್ತರಿಗೆ ಪತ್ರ ಬರೆದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮದಾಸ್ ಮೋದಿಗಿಂತ ಸೀನಿಯರ್. ಅವರಿಗಿಂತ ಬುದ್ದಿವಂತರು, ಜ್ಞಾನಿಗಳು. ಕೇವಲ ಬ್ಯಾನರ್​ನಲ್ಲಿ ಮೋದಿ ಫೋಟೋ ಹಾಕಿಕೊಂಡು ಉತ್ಸವ ಮಾಡಿದರೆ ಆಗುವುದಿಲ್ಲ ಎಂದರು.

ಮೋದಿ ಯೋಜನೆಗಳನ್ನು ವಿರೋಧಿಸಿದರೆ ಜನ ಪಾಠ ಕಲಿಸುತ್ತಾರೆ. ಯೋಜನೆಯನ್ನು ಕಾಂಗ್ರೆಸ್ ಅಥವಾ ಜೆಡಿಎಸ್ ಶಾಸಕರು ವಿರೋಧಿಸಿಲ್ಲ. ನಮ್ಮದೇ ಪಕ್ಷದ ಶಾಸಕರು ವಿರೋಧಿಸಿದ್ದಾರೆ. ಅವರನ್ನು ತಾಯಿ ಚಾಮುಂಡೇಶ್ವರಿ ಹಾಗೂ ಮೈಸೂರಿನ ಜನ ನೋಡಿಕೊಳ್ಳುತ್ತಾರೆ. ಈ ರೀತಿ ಚಿಲ್ಲರೆ ರಾಜಕಾರಣ ಮಾಡಬೇಡಿ. ಇದ್ಯಾವುದಕ್ಕೂ ನಾನು ಕೇರ್ ಮಾಡುವುದಿಲ್ಲ. ಈ ಯೋಜನೆಯನ್ನು ಪೂರ್ತಿ ಮಾಡುತ್ತೇನೆ ಎಂದು ಪ್ರತಾಪ್ ಸಿಂಹ ಸವಾಲ್‌ ಎಸೆದಿದ್ದಾರೆ.

Share Post