ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ಪ್ರಕರಣ; 40 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ವೃತ್ತದಲ್ಲಿ ನಡೆದ ಕಲ್ಲು ತೂರಾಟ ಹಾಗೂ ದಾಂದಲೆ ನಡೆಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಇದುವರೆಗೆ ಆರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಸಂಬಂಧ ಒಟ್ಟು 40 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಯುವಕನೊಬ್ಬ ಮಸೀದಿ ಮೇಲೆ ಭಗವಾಧ್ವಜ ಹಾರಿಸುವ ಚಿತ್ರವನ್ನು ವಾಟ್ಸ್ ಆ್ಯಪ್ ಸ್ಟೇಟಸ್ ಆಗಿ ಹಾಕಿಕೊಂಡಿದ್ದ. ಈ ಹಿನ್ನೆಲೆಯಲ್ಲಿ, ಇಂಡಿ ಪಂಪ್ ವೃತ್ತದಲ್ಲಿ ಮುಸ್ಲಿಂ ಸಮುದಾಯದವರು ಜಮಾಯಿಸಿದ್ದರು. ಕೆಲವರು ನಂತರ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದರು. ಘಟನೆ ಕಾರಣನಾದ ಯುವಕ ಅಭಿಷೇಕ ಹಿರೇಮಠನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.