DistrictsPolitics

ಮುರುಘಾಮಠಕ್ಕೆ ರಾಹುಲ್‌ ಗಾಂಧಿ ಭೇಟಿ; ಶರಣರ ಆಶೀರ್ವಾದ ಪಡೆದ ಕಾಂಗ್ರೆಸ್‌ ನಾಯಕ

ಚಿತ್ರದುರ್ಗ; ಸಿದ್ದರಾಮೋತ್ಸವದಲ್ಲಿ ಭಾಗವಹಿಸಲು ರಾಜ್ಯಕ್ಕೆ ಬಂದಿರುವ ರಾಹುಲ್‌ ಗಾಂಧಿಯವರು, ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ್ದರು. ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದ ರಾಹುಲ್‌ ಗಾಂಧಿ, ಮರುಘಾ ಶರಣರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 20ಕ್ಕೂ ಹೆಚ್ಚು ಮಠಾಧೀರು ಸಂವಾದದಲ್ಲಿ ಪಾಲ್ಗೊಂಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಮುಖಂಡರು ಜೊತೆಗೆ ಇದ್ದರು. ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ರಸ್ತೆ ಮಾರ್ಗವಾಗಿ ಚಿತ್ರದುರ್ಗಕ್ಕೆ ಬಂದರು. ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇತ್ತೀಚೆಗೆ ಮುರುಘಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಜೂನ್ ತಿಂಗಳಲ್ಲಿ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿನೀಡಿ ಮಾಠಾಧೀಶರೊಂದಿಗೆ ಸಭೆ ನಡೆಸಿದ್ದರು.

Share Post