Districts

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ 2.0ವಿರುದ್ಧ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ತಿರುಗಿಬಿದ್ದಿದ್ದಾರೆ. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ರು.

ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ಪಾದಯಾತ್ರೆಗೆ ಬಹಳ ಮಹತ್ವ ನೀಡುವ ಅವಶ್ಯಕತೆ ಇಲ್ಲ. ಮೇಕೆದಾಟು ಯೋಜನೆಯ ವಸ್ತುಸ್ಥಿತಿಯ ಅರಿವಿದ್ದರೂ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ. ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಯೋಜನೆಗೆ ಡಿಪಿಆರ್ ಕೂಡ ಸಿದ್ಧಪಡಿಸಲು ಸಾಧ್ಯವಾಗಲಿಲ್ಲ. ಈ ಯೋಜನೆಗೆ ಕಾಂಗ್ರೆಸ್ ನವರ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದರು.

ಮೇಕೆದಾಟು ಯೋಜನೆ ಹಾಗೂ ಕಳಸಾ ಬಂಡೂರಿ ಯೋಜನೆಗಳಿಂದ ರಾಜ್ಯದ ಜನತೆಗೆ ನೀರು ದೊರೆಯುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಪೂರಕ ನಿರ್ಣಯಗಳನ್ನು ಕೈಗೊಳ್ಳಲಿದೆ . ಈ ವಿಷಯದಲ್ಲಿ ರಾಜಕಾರಣ ಬೇಡ ಎಂಬ ಕಿವಿಮಾತನ್ನು ಹೇಳಿದ್ರು.

Share Post