Districts

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ನಾವು ರೆಡಿ; ವಿಪಕ್ಷ ನಾಯಕ ಸಿದ್ದರಾಮಯ್ಯ

ಕಲಬುರಗಿ: ಪಂಚ ರಾಜ್ಯಗಳ ಫಲಿತಾಂಶ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ ನಡೆಯುತ್ತದೆ ಎಂದು ಹೇಳಲಾಗುತ್ತಿದೆ. ಆದ್ರೆ ಅವಧಿಗೆ ಮುನ್ನ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ. ಒಂದು ವೇಳೆ ಯಾವುದೇ ಸಮಯದಲ್ಲಿ ಚುನಾವಣೆ ಘೋಷಣೆಯಾದರೂ ಅದಕ್ಕೆ ಕಾಂಗ್ರೆಸ್‌ ತಯಾರಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಯನ್ನೇ ಮಾಡದವರು ಅವಧಿಗೆ ಮುನ್ನ ವಿಧಾನಸಭೆ ಚುನಾವಣೆ ಮಾಡುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಒಂದು ವೇಳೆ ಮಾಡಿದರೂ, ಎದುರಿಸುವುದಕ್ಕೆ ನಾವು ಸಮರ್ಥವಾಗಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ ಎಂಬ ಯಡಿಯೂರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಅವರನ್ನೇ ಅಧಿಕಾರದಿಂದ ತೆಗೆದಿದ್ದಾರಲ್ಲ. ಆಗ ಅವರು ಅತ್ತಿದ್ರಲ್ವಾ..?, ಜೈಲಿಗೆ ಹಾಕುತ್ತೇ‌ವೆ ಅಂತ ಹೆದರಿಸಿದ್ದಾರಲ್ಲ ಎಂದು ಪ್ರಶ್ನಿಸಿದರು.ಎ ಲ್ಲಾ ಪಕ್ಷಗಳಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇದ್ದೇ ಇರ್ತವೆ. ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪತ್ರ ಬರೆದಿದ್ದರು. ಬಸನಗೌಡ ಪಾಟೀಲ ಯತ್ನಾಳ ಸರ್ಕಾರದ ವಿರುದ್ಧ ಮಾತನಾಡಿಲ್ವಾ. ಅದು ಭಿನ್ನಾಭಿಪ್ರಾಯ ಅಲ್ವಾ’ ಎಂದು ಭಿನ್ನಾಭಿಪ್ರಾಯ ಕುರಿತ ಪ್ರಶ್ನೆಗೆ ಉತ್ತರಿಸಿದರು.

Share Post