DistrictsPolitics

ತಿಂಗಳಾಂತ್ಯಕ್ಕೆ ಕಾಂಗ್ರೆಸ್‌ ಮೊದಲ ಪಟ್ಟಿ ರಿಲೀಸ್‌; ಸಿದ್ದರಾಮಯ್ಯ

ತುಮಕೂರು; ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಮಾಡಲಾಗುವುದು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ. ತುರುವೇಕೆರೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ನಂತರ ಮಾತನಾಡಿದ ಅವರು, ಈ ವಿಚಾರ ತಿಳಿಸಿದ್ದಾರೆ.

ಈಗಾಗಲೇ ಜೆಡಿಎಸ್ ಪಕ್ಷದಿಂದ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 2ನೇ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ಈ ತಿಂಗಳ ಅಂತ್ಯಕ್ಕೆ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ ಎಂದರು.

ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಮೊದಲ ಪಟ್ಟಿಯಲ್ಲಿ 150 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದರು.

Share Post