ಬೊಮ್ಮಾಯಿ, ಆರಗ ಪೋಸ್ಟರ್‌ಗೆ ಮಂಡ್ಯದಲ್ಲಿ ಮೊಟ್ಟೆ ಎಸೆತ
ಮಂಡ್ಯ; ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಯಿತು. ಈ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಪೋಸ್ಟರ್‌ಗೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಭಾವಚಿತ್ರಗಳಿರುವ ಪೋಸ್ಟರ್‌ಗೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಖಂಡನೀಯ. ಅವರು ವಿಷಪೂರಿತ ಮೊಟ್ಟೆಗಳನ್ನು ಎಸೆದಿದ್ದಾರೆ. ಭದ್ರತೆ ಲೋಪದಿಂದ ಕೃತ್ಯ ನಡೆದಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ ಕೈ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.