CrimeDistrictsPolitics

ಖರ್ಗೆ ಕುಟುಂಬದ ಹತ್ಯೆಗೆ ಸಂಚು; ನನಗೇನೂ ಗೊತ್ತಿಲ್ಲ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ; ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲುವುದಕ್ಕೆ ಬಿಜೆಪಿ ಸಂಚು ರೂಪಿಸಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ರಾಥೋಡ್‌ ಅವರ ಆಡಿಯೋ ರಿಲೀಸ್‌ ಮಾಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ರಣದೀಪ್‌ ಸುರ್ಜೇವಾಲಾ ಅವರು, ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ಸದಸ್ಯರನ್ನು ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಸಾಕ್ಷಿಯಾಗಿ ಚಿತ್ತಾಪುರ ಕ್ಷೇತ್ರ ಬಿಜೆಪಿ ಅಭ್ಯರ್ಥಿಯದ್ದು ಎನ್ನಲಾದ ಆಡಿಯೋ ರಿಲೀಸ್‌ ಮಾಡಿದ್ದರು. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಹುಬ್ಬಳ್ಳಿಯಲ್ಲಿ ಸಿಎಂ ಉತ್ತರಿಸಿದರು. ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ನನಗೇನೂ ಗೊತ್ತಿಲ್ಲ. ಆದ್ರೆ, ಈ ವಿಚಾರವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಸೂಕ್ತ ತನಿಖೆ ಮಾಡುತ್ತೇವೆ. ಯಾರದೇ ತಪ್ಪಿದ್ದರೂ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Share Post