CrimeDistricts

ಸ್ವಂತ ತಂದೆಯಿಂದಲೇ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್‌

ಬೀದರ್; ಬಸವಕಲ್ಯಾಣ ತಾಲ್ಲೂಕಿನ ಗ್ರಾಮವೊಂದರಲ್ಲಿ ತಂದೆಯೇ ತನ್ನ ಮಗಳ ಮೇಲೆ ಪೈಶಾಚಿಕ ಕೃತ್ಯ ಎಸಗಿದ್ದಾನೆ. ನಿರಂತರವಾಗಿ ಮಗಳ ಮೇಲೆ ಅತ್ಯಾಚಾರ ಎಸಗುತ್ತಾ ಬಂದಿದ್ದು, ರೆಡ್‌ಹ್ಯಾಂಡಾಗಿ ಅಜ್ಜಿಯ ಕೈಗೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಆತನನ್ನು ಬಸವಕಲ್ಯಾಣ ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.ʼ

ಮನೆಯಲ್ಲಿ ಎಲ್ಲರೂ ಮಲಗಿದ ನಂತರ ಮಗಳ ಮೇಲೆ ಆರೋಪಿ ಅತ್ಯಾಚಾರ ಎಸಗುತ್ತಿದ್ದ. ಒಂದು ವರ್ಷದಿಂದ ಈ ರೀತಿ ಮಾಡುತ್ತಿದ್ದು, ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಸಿದ್ದ ಎನ್ನಲಾಗಿದೆ. ಕಳೆದ ರಾತ್ರಿ ಕೂಡಾ ಎಲ್ಲರೂ ಮಲಗಿದ ಮೇಲೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಈ ವೇಳೆ ಅಜ್ಜಿಗೆ ಕೈಗೆ ರೆಡ್‌ಹ್ಯಾಂಡಾಗಿ ಸಿಕ್ಕಿದ್ದಾನೆ. ಅಜ್ಜಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

Share Post