ಸಿದ್ದರಾಮಯ್ಯ ವಿರುದ್ಧ ಅವಹೇಳನ; ಪ್ರತಾಪ ಸಿಂಹ ವಿರುದ್ಧ ಎಫ್ಐಆರ್
ಮೈಸೂರು; ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಅವರ ನೀಡಿದ ದೂರಿನ ಹಿನ್ನೆಲೆಯಲ್ಲಿ ದೇವರಾಜ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನಿನ್ನೆ ಸಂಸದ ಪ್ರತಾಪ ಸಿಂಹ ಅವರು ಮೈಸೂರಿನಲ್ಲಿ ಮಾತನಾಡುತ್ತಾ, ನಾನು ಸೋಮಾರಿ ಸಿದ್ಧನ ರೀತಿ ಸುಮ್ಮನೆ ಕುಳಿತುಕೊಂಡು ಜಾತಿ ರಾಜಕಾರಣ ಮಾಡೋದಿಲ್ಲ ಎಂದು ಹೇಳಿದ್ದರು. ಹಲವಾರು ರೀತಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಹೀಗಾಗಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಸಂಸದ ಪ್ರತಾಪ ಸಿಂಹ ಅವರ ವಿರುದ್ಧ ಕೇಸ್ ದಾಖಲು ಮಾಡಿದ್ದು, ಇದರ ಆಧಾರದ ಮೇಲೆ ಪೊಲೀಸರು ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ಹಾಕಿದ್ದಾರೆ.